ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇವತ್ತು ನರೇಂದ್ರ ಮೋದಿಯವರು ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ.
ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರೈತರಿಗೆ ನೀಡಲಾಗುವ 2 ಸಾವಿರ ರೂಪಾಯಿ ವಿತರಣೆ ಕಡತಕ್ಕೆ ಪ್ರಧಾನಿ ಸಹಿ ಹಾಕಿದ್ದಾರೆ.
ಈ ಮೂಲಕ ರೈತರಿಗೆ 17ನೇ ಕಂತಿನ ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ ಆಗಲಿದೆ. ಇದು ದೇಶದ 9.3 ಕೋಟಿ ರೈತರಿಗೆ ಅನುಕೂಲವಾಗಲಿದ್ದು, 20 ಸಾವಿರ ಕೋಟಿ ರೂಪಾಯಿಯಷ್ಟು ಮೊತ್ತ ವಿತರಣೆ ಆಗಲಿದೆ.
ಇವತ್ತು ಸಂಜೆ 5 ಗಂಟೆಗೆ ಪ್ರಧಾನಿ ಮೋದಿಯವರ ಸಂಪುಟದ ಮೊದಲ ಸಭೆ ನಡೆಯಲಿದೆ.
ADVERTISEMENT
ADVERTISEMENT