ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಲು ರಾಷ್ಟ್ರಧ್ವಜವನ್ನು ಬಳಸಿದ ಅಸ್ಸಾಂನ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯು ಮೇ 8 ರಂದು ನಡೆದಿದ್ದು, ಮೊಹಮ್ಮದ್ ತಾರಿಕ್ ಅಜೀಜ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಅದೇ ದಿನ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಅಸ್ಸಾಂನ ನಿವಾಸಿ ಎಂ.ಡಿ.ತಾರಿಕ್ ಅಜೀಜ್ ಅವರು ದುಬೈನಿಂದ 6E24 ಫ್ಲೈಟ್ನಲ್ಲಿ ಬಂದರು ಮತ್ತು ಇಂಡಿಗೋ ಫ್ಲೈಟ್ 6E 5398 ಮೂಲಕ ದಿಮಾಪುರ್ಗೆ ಹೋಗಬೇಕಾಗಿತ್ತು. ಅವರು ಭಾರತದ ರಾಷ್ಟ್ರಧ್ವಜವನ್ನು ನೆಲದ ಮೇಲೆ ಹಾಸಿ ಅದರ ಮೇಲೆ ಕುಳಿತು ನಮಾಜ್ ಮಾಡಿದ್ದಾರೆ. ಅವರ ಚಟುವಟಿಕೆಗಳು ಅನುಮಾನಾಸ್ಪದ ಮತ್ತು ಅನಪೇಕ್ಷಿತವಾಗಿದ್ದು, ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದಾರೆ’ ಎಂದು ಪೊಲೀಸರು ದಾಖಲಿಸಿರುವ ಎಫ್ಐಆರ್ ನಲ್ಲಿ ಹೇಳಲಾಗಿದೆ.
ದೇಶಾದ್ಯಂತದ ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನು ನಿರ್ವಹಿಸುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿ ಅಜೀಜ್ನನ್ನು ಮೊದಲು ಬಂಧಿಸಿ ನಂತರ ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದರು. ರಾಷ್ಟ್ರೀಯ ಗೌರವ ಅವಮಾನಗಳ ತಡೆ ಕಾಯಿದೆ, 1971 ರ ಅಡಿಯಲ್ಲಿ ದೆಹಲಿ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು. ಇದು ಜಾಮೀನು ನೀಡಬಹುದಾದ ಅಪರಾಧವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.