ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದಲ್ಲಿರುವ ಮೂರನೇ ಅತೀ ಶ್ರೀಮಂತ ಸಚಿವರಾಗಿದ್ದಾರೆ.
ಪ್ರಜಾಪ್ರಭುತ್ವ ಸುಧಾರಣೆಗಾಗಿರುವ ಸಂಘ (ADR) ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ 217 ಕೋಟಿ ರೂಪಾಯಿ ಮೌಲ್ಯದ ಸಂಪತ್ತಿನ ಒಡೆಯರಾಗಿರುವ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಕುಮಾರಸ್ವಾಮಿ ಅವರು 3ನೇ ಶ್ರೀಮಂತ ಸಚಿವ.
ಟಿಡಿಪಿ ಪಕ್ಷದ ಸಂಸದರೂ ಆಗಿರುವ ಡಾ ಚಂದ್ರಶೇಖರ್ ಪೆಮ್ಮಸಾನಿ ಅವರು 5,705 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಹೊಂದಿದ್ದು ಶ್ರೀಮಂತ ಸಚಿವರ ಪೈಕಿ ಮೊದಲ ಸ್ಥಾನದಲ್ಲಿದ್ದಾರೆ.
425 ಕೋಟಿ ರೂಪಾಯಿ ಆಸ್ತಿಯನ್ನು ಹೊಂದಿರುವ ಜ್ಯೋತಿರಾಧಿತ್ಯ ಸಿಂಧಿಯಾ 2ನೇ ಅತ್ಯಂತ ಶ್ರೀಮಂತ ಸಚಿವ.
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು 144 ಕೋಟಿ ರೂಪಾಯಿ ಸಂಪತ್ತಿನೊಂದಿಗೆ 4ನೇ ಸ್ಥಾನದಲ್ಲಿದ್ದಾರೆ. ರಾವ್ ಇಂದ್ರಜಿತ್ ಸಿಂಗ್ 121 ಕೋಟಿ ರೂಪಾಯಿ, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ 110 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ 65 ಕೊಟಿ ರೂಪಾಯಿ ಮೌಲ್ಯದ ಆಸ್ತಿ, ಕೃಷ್ಣನ್ ಲಾಲ್ ಗುರ್ಜರ್ 62 ಕೋಟಿ ರೂಪಾಯಿ ಮೌಲ್ಯದ ಸಂಪತ್ತು, ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ ಸೋಮಣ್ಣ 60 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಹೊಂದಿದ್ದಾರೆ. ಸಚಿವ ಪಂಕಜ್ ಚೌಧರಿ 41 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ.
ADVERTISEMENT
ADVERTISEMENT