ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಪಕ್ಷದಿಂದ ಅಮಾನತುಗೊಂಡಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಜೀವ ಬೆದರಿಕೆಗಳು ಬರುತ್ತಿವೆ ಎಂಬ ದೂರಿನ ಆಧಾರದ ಮೇಲೆ ಅಪರಿಚಿತರ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಎಫ್ಐಆರ್ ಆಧರಿಸಿ ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 506 (ಬೆದರಿಕೆ), 507 (ಅನಾಮಧೇಯ ಸಂವಹನದಿಂದ ಕ್ರಿಮಿನಲ್ ಬೆದರಿಕೆ) ಮತ್ತು 509 ಅಡಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಖಾಸಗಿ ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ನೂಪುರ್ ಶರ್ಮಾ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮತ್ತು ಬಿಜೆಪಿ ರಾಷ್ಟ್ರೀಯ ವಕ್ತಾರೆ ಹುದ್ದೆಯಿಂದ ಭಾನುವಾರ ಅಮಾನತುಗೊಳಿಸಲಾಗಿದೆ.