ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಮೂವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಹಾಸನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಅವರು ಪಿಡಿಒಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಡಿ.ಕಾಳೇನಹಳ್ಳಿ ಗ್ರಾಮ ಪಂಚಾಯತಿ ಪಿಡಿಒ ಸಿ ಎನ್ ನವೀನ್, ಕೆಂಬಾಳು ಗ್ರಾಮ ಪಂಚಾಯತಿ ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಗ್ರಾಮ ಪಂಚಾಯತ್ ಹಾಗೂ ದಿಂಡಗೂರು ಗ್ರಾಮ ಪಂಚಾಯತ್ ಪಿಡಿಒ ರಾಮಸ್ವಾಮಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಗೆ ಮಂಜೂರು ಮಾಡಿದ ಆರೋಪದಡಿಯಲ್ಲಿ ಅಮಾನತು ಮಾಡಲಾಗಿದೆ.
ADVERTISEMENT
ADVERTISEMENT