ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಸರ್ಕಾರಿ ನೌಕರರ ಬೇಡಿಕೆಯಾಗಿದ್ದ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅಸ್ತು ಎಂದಿದ್ದು, ಶೇ.2.75 ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ತಿಳಿಸಿರುವ ಅವರು, ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು.
— Basavaraj S Bommai (Modi Ka Parivar) (@BSBommai) April 5, 2022
ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳದ ಆದೇಶ ಜನವರಿ 1 ರಿಂದಲೇ ಜಾರಿಗೆ ಬರುವುದು ನೌಕರರಿಗೆ ಮತ್ತಷ್ಟು ಸಿಹಿ ನೀಡಿದೆ. ತುಟ್ಟಿ ಭತ್ಯೆ ಹೆಚ್ಚಿಸುವಂತೆ ಸರ್ಕಾರಿ ನೌಕರರು ಆಗ್ರಹಿಸುತ್ತಲೇ ಬಂದಿದ್ದರು. ಹಾಗೆಯೇ ವಿಧಾನಸಭೆಯ ಅಧಿವೇಶನದಲ್ಲಿಯೂ ಸಹಿತ ಮಾಜಿ ಸಿಎಂ ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದರು.