ಮೈಸೂರು-ದರ್ಬಾಂಗ ಬಾಗ್ಮತಿ ಎಕ್ಸ್ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಎಕ್ಸ್ಪ್ರೆಸ್ ರೈಲಿನ 12 ಬೋಗಿಗಳು ಹಳಿ ತಪ್ಪಿವೆ. ಡಿಕ್ಕಿ ಹೊಡೆದ ರಭಸಕ್ಕೆ ಗೂಡ್ಸ್ ರೈಲಿನ ಪಾರ್ಸೆಲ್ ವ್ಯಾನ್ ಬೆಂಕಿಯಿAದ ಹೊತ್ತಿ ಉರಿದಿದೆ. ಜೊತೆಗೆ ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳೂ ಹೊತ್ತಿ ಉರಿದಿವೆ. ಅವಘಡದಲ್ಲಿ 10 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ತಮಿಳುನಾಡು ರಾಜ್ಯದ ರಾಜಧಾನಿ ಚೆನ್ನೆ ಕಾವೇರೈಪೆಟೈ ಬಳಿ ರಾತ್ರಿ 8.30ರ ವೇಳೆಗೆ ಅಪಘಾತ ಸಂಭವಿಸಿದೆ.
ತಾನು ಸಂಚರಿಸಬೇಕಿದ್ದ ಹಳಿಯನ್ನು ಬಿಟ್ಟು ಪಕ್ಕದ ಹಳಿಯಲ್ಲಿ ಎಕ್ಸ್ಪ್ರೆಸ್ ರೈಲು ಸಂಚರಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಗಂಟೆಗೆ 75 ಕಿಲೋ ಮೀಟರ್ ವೇಗದಲ್ಲಿ ಸಂಚರಿಸ್ತಿದ್ದ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.
ADVERTISEMENT
ADVERTISEMENT