ADVERTISEMENT
ಬೆಂಗಳೂರಿನಿಂದ ಹೌರಾಗೆ ಹೊರಟ್ಟಿದ್ದ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲು ಮತ್ತು ಶಾಲಿಮರ್-ಚೆನ್ನೈ ನಡುವಿನ ಕೋರಮಂಡಲ ಎಕ್ಸ್ಪ್ರೆಸ್ ರೈಲು ನಡುವಿನ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿದೆ.
ಯಶವಂತಪುರ-ಹೌರಾ ನಡುವಿನ ರೈಲಿನಲ್ಲಿದ್ದ ಪ್ರಯಾಣಿಕರಲ್ಲಿ ಇಬ್ಬರು ಮೃತಪಟ್ಟಿದ್ದಾರೆ, ನಾಲ್ವರು ಗಾಯಗೊಂಡಿದ್ದಾರೆ.
ದುರಂತಕ್ಕೆ ಆಘಾತ ವ್ಯಕ್ತಪಡಿಸಿರುವ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರು ಪರಿಹಾರ ಘೋಷಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಮತ್ತು ಸಣ್ಣ ಪುಟ್ಟ ಗಾಯಗಳಾದವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ದುರಂತ ಸ್ಥಳಕ್ಕೆ ರೈಲ್ವೆ ಸಚಿವರು ದೌಡಾಯಿಸಿದ್ದಾರೆ.
ಕೋಲ್ಕತ್ತಾ ಮತ್ತು ಭುವನೇಶ್ವರದಿಂದ ಪರಿಹಾರ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ.
ವಾಯುಸೇನೆಯನ್ನೂ ರಕ್ಷಣಾ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ADVERTISEMENT