No Result
View All Result
ಟ್ರಕ್ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಮೃತಪಟ್ಟ 13 ಮಂದಿಯೂ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದವರು.
ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ವಾಪಸ್ ಆಗುವ ವೇಳೆ ಅಪಘಾತ ಸಂಭವಿಸಿದೆ.
7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ.
ಪರಶುರಾಮ್ (45), ಭಾಗ್ಯ (40), ನಾಗೇಶ (50), ವಿಶಾಲಾಕ್ಷಿ (40), ಅರ್ಪಿತಾ (18), ಸುಭದ್ರಾ ಬಾಯಿ (65), ಪುಣ್ಯ (50), ಮಂಜುಳಾಬಾಯಿ, ಚಾಲಕ ಆದರ್ಶ್ (23), ಮಾನಸ (24), ರೂಪಾ (40), ಮಂಜುಳಾ (50) ಮೃತರು ಮೃತಪಟ್ಟವರು.
ಎಮ್ಮೆಹಟ್ಟಿ ಗ್ರಾಮ ನಾಗೇಶ್ ಮತ್ತು ವಿಶಾಲಾಕ್ಷಿ ಅವರ ಮಗ ಆದರ್ಶ್ ಹೊಸ ಟಿಟಿ ವಾಹನ ಖರೀದಿಸಿದ್ದರು. ಹೊಸ ಟಿಟಿ ವಾಹನಕ್ಕೆ ಪೂಜೆ ಮಾಡಿಸಲು ಕುಟುಂಬ ಸಮೇತ ದೇವಸ್ಥಾನಗಳಿಗೆ ತೆರಳಿದ್ದರು.
No Result
View All Result
error: Content is protected !!