ಬೆಂಗಳೂರು: ದೇಶಾದ್ಯಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಕಳೆದ 24 ಗಂಟೆಯಲ್ಲಿ ದೇಶದಲ್ಲಿ 614 ಹಾಗೂ ರಾಜ್ಯದ 22 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ದೇಶದಲ್ಲಿ 2,311 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಬುಧವಾರ 808 ಮಂದಿಗೆ ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿದೆ. 20 ಸೋಂಕಿತರು ಆಸ್ಪತ್ರೆಯಲ್ಲಿದ್ದಾರೆ. 7 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 72 ಮಂದಿಯನ್ನು ಹೋಂ ಐಸೋಲೇಷನ್ ನಲ್ಲಿ ಇರಿಸಲಾಗಿದೆ. ಈಗಾಗಲೇ ಐವರು ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೋವಿಡ್ ಉಪತಳಿ ಜೆಎನ್ 1 ವೈರಸ್ ಬಗ್ಗೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳನ್ನು ಎಚ್ಚರಿಕೆ ನೀಡಿದೆ. ಆದರೆ ಇದರ ಬಗ್ಗೆ ಆತಂಕಪಡಬೇಕಿಲ್ಲ ಎಂದು ಹೇಳಿದೆ.