ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಮುಂದಿನ 2 ದಿನಗಳಲ್ಲಿಯೂ ಮಳೆ ಸುರಿಯುವ ಹಾವಾಮಾನ ಇಲಾಖೆಯ ಮುನ್ಸೂಚನೆಯ ಆಧಾರದ ಮೇಲೆ ಉಡುಪಿ ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.
ಜುಲೈ 8 ಮತ್ತು 9 ರಂದು ಹಮಾಮಾನ ಇಲಾಖೆ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಈ ಎರಡೂ ದಿನಗಳ ಕಾಲ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ.
ಅಲ್ಲದೇ, ಮೀನುಗಾರರು ಸಮುದ್ರದಕ್ಕೆ ಇಳಿಯಬಾರದು, ಪ್ರವಾಸಿಗರು ನದಿ ಹಾಗೂ ಸಮುದ್ರದ ದಂಡೆಗೆ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಹೊರಡಿಸಿದ ಆದೇಶದಲ್ಲಿ ಹೇಳಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಕಳೆದ 2 ದಿನಗಳಿಂದಲೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.