ADVERTISEMENT
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಉಡುಪಿ ಕೃಷ್ಣ ಮಠದ ಸ್ವಾಮೀಜಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಇಬ್ಬರು ಕಾಂಗ್ರೆಸ್ ಸಚಿವರನ್ನು ಭೇಟಿಯಾಗಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸ್ವಾಮೀಜಿಯವರು ಭೇಟಿಯಾಗಿ ಆರ್ಶೀವದಿಸಿದ್ದಾರೆ.
ಈ ಬಗ್ಗೆ ಸ್ವತಃ ದಿನೇಶ್ ಗುಂಡೂರಾವ್ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.
ಉಡುಪಿ ಪೇಜಾವರ ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿರವರು ಇಂದು ನಮ್ಮ ನಿವಾಸಕ್ಕೆ ಭೇಟಿ ನೀಡಿದರು. ಸ್ವಾಮೀಜಿಗಳಿಂದ ಆಶೀರ್ವಾದ ಪಡೆದು ,ಫಲತಾಂಬೂಲ ನೀಡಿ ಸನ್ಮಾನಿಸಿದೆ
ಎಂದು ಟ್ವೀಟಿಸಿದ್ದಾರೆ.
ಇನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಗೃಹ ಸಚಿವ ಡಾ ಜಿ ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಆರ್ಶೀವದಿಸಿದ್ದಾರೆ.
ಪರಮೇಶ್ವರ್ ದಂಪತಿ ಫಲ ತಾಂಬೂಲ ನೀಡಿ ಸ್ವಾಮೀಜಿ ಸನ್ಮಾನಿಸಿದ್ದಾರೆ.
ADVERTISEMENT