ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ ಪೊಲೀಸರು ಕ್ಲೀನ್ಚಿಟ್ ನೀಡಿದ್ದಾರೆ.
ಉಡುಪಿ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅಂತಿಮ ತನಿಖಾ ವರದಿ ಸಲ್ಲಿಸಿದ್ದಾರೆ.
ಈ ಪ್ರಕರಣದಲ್ಲಿ ಈಶ್ವರಪ್ಪ ಸಚಿವ ಸ್ಥಾನ ಕಳೆದುಕೊಂಡಿದ್ದರು ಮತ್ತು ನನಗೆ ಕ್ಲೀನ್ಚಿಟ್ ಸಿಗುತ್ತದೆ ಎಂದು ಕೆಲ ದಿನಗಳ ಹಿಂದೆಯಷ್ಟೇ ಸ್ವತಃ ಈಶ್ವರಪ್ಪನವರೇ ಹೇಳಿದ್ದರು.
ಮಾಜಿ ಸಚಿವ ಈಶ್ವರಪ್ಪ ಅಥವಾ ಈಶ್ವರಪ್ಪ ಆಪ್ತರ ಜೊತೆಗೆ ಸಂತೋಷ್ ಪಾಟೀಲ್ಗೆ ಸಂಪರ್ಕ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ತನಿಖೆ ವೇಳೆ ಈಶ್ವರಪ್ಪ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ ಎಂದು ಉಡುಪಿ ಪೊಲೀಸರು ಅಂತಿಮ ವರದಿಯಲ್ಲಿ ತಿಳಿಸಿದ್ದಾರೆ.
ಆದರೆ ಪ್ರಕರಣದಲ್ಲಿ ಈಶ್ವರಪ್ಪ ಅವರನ್ನು ಕರೆದು ವಿಚಾರಣೆಯನ್ನೂ ನಡೆಸಿಲ್ಲ.
ಇತ್ತೀಚೆಗಷ್ಟೇ ಸಂತೋಷ್ ಪತ್ನಿ ರಾಜ್ಯಪಾಲರಿಗೆ ಪತ್ರ ಬರೆದು ಪೊಲೀಸರ ತನಿಖೆಗೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.