ಪಂಚರಾಜ್ಯಗಳ ಚುನಾವಣಾ ಸೋಲಿನ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಹೊಸ ರೂಪ ನೀಡುವ ಸಲುವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಮತ್ತು ರಾಹುಲ್ ಗಾಂಧಿ ರಾಜೀನಾಮೆ ನೀಡಲಿದ್ದಾರೆ ಎಂದು ಎನ್ಡಿಟಿವಿ ಮಾಡಿರುವ ವರದಿಯನ್ನು ಕಾಂಗ್ರೆಸ್ ಖಂಡಿಸಿದೆ.
ಈ ವರದಿಯ ಬಗ್ಗೆ ಟ್ವೀಟಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ, `ಆಡಳಿತರೂಢ ಬಿಜೆಪಿಯ ಸೂಚನೆಯಂತೆ ಅದರ ಮೂಲಗಳಿಂದ ಕಪೋಲಕಲ್ಪಿತ ವರದಿ ಮಾಡಿರುವುದು ಸರಿಯಲ್ಲ’ ಎಂದು ಟ್ವೀಟಿಸಿದ್ದಾರೆ.
The news story of alleged resignations being carried on NDTV based on unnamed sources is completely unfair, mischievous and incorrect.
It is unfair for a TV channel to carry such unsubstantiated propaganda stories emanating from imaginary sources at the instance of ruling BJP.
— Randeep Singh Surjewala (@rssurjewala) March 12, 2022