ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ತಮ್ಮ ತಾಯಿಯನ್ನು ಭೇಟಿ ಆಗಿದ್ದಾರೆ.
ತಮ್ಮ ತಾಯಿ ಸಾವಿತ್ರಿ ದೇವಿ ಅವರ ಪಾದವನ್ನು ಮುಟ್ಟಿ ಆರ್ಶೀವಾದವನ್ನು ಪಡೆಯುತ್ತಿರುವ ಚಿತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊAಡಿರುವ ಯೋಗಿ ಅವರು ಮಾ (ಅಮ್ಮಾ) ಎಂದು ಬರೆದುಕೊಂಡಿದ್ದಾರೆ.
ಉತ್ತರಾಖAಡ್ನ ಪೌರಿ ಯೋಗಿ ಆದಿತ್ಯನಾಥ್ ಅವರ ತವರೂರು. 28 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಯೋಗಿ ಅವರು ಭಾಗವಹಿಸುತ್ತಿದ್ದಾರೆ.
2020ರ ಏಪ್ರಿಲ್ನಲ್ಲಿ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಹರಿದ್ವಾರದಲ್ಲಿ ನಡೆದಿದ್ದ ತಮ್ಮ ತಂದೆಯ ಅಂತ್ಯಸAಸ್ಕಾರದಲ್ಲಿ ಪಾಲ್ಗೊಳ್ಳಲು ಯೋಗಿ ಆದಿತ್ಯನಾಥ್ ಅವರಿಗೆ ಸಾಧ್ಯವಾಗಿರಲಿಲ್ಲ. 23 ಕೋಟಿ ಜನರ ಕರ್ತವ್ಯನ ನನ್ನ ಮೇಲಿರುವ ಕಾರಣ ಪಾಲ್ಗೊಳ್ಳಲು ಆಗುತ್ತಿಲ್ಲ ಎಂದು ಸಿಎಂ ಯೋಗಿ ಅಸಹಾಯಕತೆ ವ್ಯಕ್ತಪಡಿಸಿದ್ದರು.