ಉತ್ತರಪ್ರದೇಶದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಈಗ ಮುಜುಗರದ ಮೇಲೆ ಮುಜುಗರ.
ಶಸ್ತ್ರಾಸ್ತ್ರ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಕಾನ್ಪುರ ಜಿಲ್ಲೆಯ ನ್ಯಾಯಾಲಯ ಆದೇಶ ನೀಡಿದ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ಸಣ್ಣ ಮತ್ತು ಮಧ್ಯಮಗಾತ್ರದ ಕೈಗಾರಿಕೆ ಸಚಿವ ರಾಕೇಶ್ ಸಾಚಾನ್ ಕೋರ್ಟ್ನಿಂದಲೇ ಓಡಿಹೋಗಿರುವ ಬಗ್ಗೆ ದೂರು ಸಲ್ಲಿಕೆ ಆಗಿದೆ.
ಈ ಸಲದ ಚುನಾವಣೆಗೂ ಮೊದಲೂ ರಾಕೇಶ್ ಕಾಂಗ್ರೆಸ್ನಿಂದ ದೂರವಾಗಿ ಬಿಜೆಪಿ ಸೇರಿದ್ದರು.
ಶಿಕ್ಷೆಯ ಪ್ರಮಾಣ ಪ್ರಕಟವಾಗುದಕ್ಕೂ ಮೊದಲು ಸಚಿವರು ಓಡಿಹೋಗಿದ್ದಾರೆ ಎಂದು ವರದಿ ಆಗಿದೆ.
ಇತ್ತ ಮತ್ತೋರ್ವ ಸಚಿವ ಸಂಜಯ್ ನಿಶಾದ್ ವಿರುದ್ಧ ಕೆಳ ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿದ್ದು, ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸುವಂತೆ ಸೂಚಿಸಿದೆ.
ನಿಶಾದ್ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಏಳು ವರ್ಷಗಳ ಹಿಂದೆ ನಡೆದಿದ್ದ ಪ್ರತಿಭಟನೆ ವೇಳೆ ಪೊಲೀಸರು ಮತ್ತು ನಿಶಾದ್ ಪಕ್ಷದ ಕಾರ್ಯಕರ್ತರ ಜೊತೆಗೆ ಗಲಾಟೆ ಆಗಿತ್ತು. ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನಿರಂತರವಾಗಿ ಸಮನ್ಸ್ ನೀಡಿದ್ದರೂ ಸಚಿವ ಸಂಜಯ್ ನಿಶಾದ್ ಹಾಜರಾಗಿರಲ್ಲ. ಈ ಹಿನ್ನೆಲೆಯಲ್ಲಿ ಈಗ ಗೋರಖ್ಪುರದ ನ್ಯಾಯಾಲಯ ಜಾಮೀನುರಹಿತ ಬಂಧನದ ವಾರೆಂಟ್ ಹೊರಡಿಸಿದೆ.