ಉತ್ತರ ಪ್ರದೇಶದ ಮೆಹಬೂಬ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡದೇ, ಇಬ್ಬರು ಮಹಿಳೆಗೆ ಜನ್ಮ ನೀಡಿದ್ದಾರೆ ಎಂದು ಕುಟುಂಬ ಸದಸ್ಯರು ಬರ್ಬರವಾಗಿ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.
ತನಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಗಂಡು ಮಗು ಬೇಕೆಂದು ಪತಿ ಮತ್ತು ಅತ್ತೆಯಂದಿರು ಪದೇ ಪದೇ ಕಿರುಕುಳ ಮತ್ತು ಹಲ್ಲೆ ನಡೆಸುತ್ತಿದ್ದರು ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.
ಗಂಡ ಮತ್ತು ಅತ್ತೆ-ಮಾವಂದಿರು ನನಗೆ ಗಂಡು ಮಗುವಾಗಲಿಲ್ಲ ಎಂದು ಚಿತ್ರಹಿಂಸೆ ನೀಡುತ್ತಿದ್ದರು. ಎರಡನೇ ಮಗಳು ಹುಟ್ಟಿದ ನಂತರ ಕಿರುಕುಳ ಹೆಚ್ಚಾಯಿತು ಎಂದು ಮಹಿಳೆ ನೋವು ತೋಡಿಕೊಂಡಿದ್ದಾಳೆ.
ಮಹಿಳೆಯ ಮೇಲೆ ಹಲ್ಲೆ ಮಾಡುತ್ತಿರುವ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋದಲ್ಲಿ ಇಬ್ಬರು ಮಹಿಳೆಯರು ಈಕೆಯ ಮೇಲೆ ಬರ್ಬರವಾಗಿ ಒದೆಯುವುದು ಕಂಡುಬಂದಿದೆ. ಈ ವೇಳೆ ಮಹಿಳೆ ಅಳುತ್ತಾ ಹಲ್ಲೆ ನಿಲ್ಲಿಸುವಂತೆ ಗೋಗರೆದರು ಹಲ್ಲೆ ನಡೆಸುವುದನ್ನು ನಿಲ್ಲಿಸಿಲ್ಲ.
ಮಹಿಳೆಯ ಮೇಲೆ ಹಲ್ಲೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೆಹಬೂಬ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧಾ ಸಿಂಗ್ ಅವರು, ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕಣ ದಾಖಲಿಸಲಾಗಿದ್ದು, ಹಲ್ಲೆ ಮಾಡಿದವರ ಮೇಳೆ ಕಾನೂನು ರೀತ್ಯಾ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.