ಭಾರತೀಯ ಸಿನಿಮಾ ರಂಗದ ಖ್ಯಾತ ನಿರ್ದೇಶಕ, ಬಾಹುಬಲಿ ಖ್ಯಾತಿಯ ಎಸ್.ಎಸ್. ರಾಜಮೌಳಿ ಅವರ ತಂದೆ, ರಾಜ್ಯ ಸಭಾ ಸಂಸದ ವಿಜಯೇಂದ್ರ ಪ್ರಸಾದ್ ರಾಷ್ಟ್ರೀಯ ಸ್ವಯಂ ಸೇವಾ ಸಂಘ ( RSS ) ಕುರಿತಾಗಿ ಸಿನಿಮಾ ಮತ್ತು ವೆಬ್ ಸೀರಿಸ್ ಮಾಡುವುದಾಗಿ ತಿಳಿಸಿದ್ದಾರೆ.
ವಿಜಯವಾಡದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ವಿಜಯೇಂದ್ರ ಪ್ರಸಾದ್ ಅವರು, RSS ಕುರಿತು ಸಿನಿಮಾ ಮತ್ತು ವೆಬ್ ಸೀರಿಸ್ ತಯಾರಾಗಲಿದ್ದು, ಎರಡಕ್ಕೂ ನಾನೇ ನಿರ್ದೇಶನ ಮಾಡಲಿದ್ದೇನೆ ಎಂದು ಹೇಳಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಬರೆಯುವುದಕ್ಕೆ ಆರಂಭಿಸಿರುವುದಾಗಿಯೇ ತಿಳಿಸಿದ್ದಾರೆ.
ಈಗಾಗಲೇ ಸಿನಿಮಾದ ಸ್ಕ್ರಿಪ್ಟ್ ಸಿದ್ಧವಾಗಿದ್ದು, ಇಡೀ ಕಥೆಯನ್ನು ಮೋಹನ್ ಭಾಗವಾತ್ ಮೆಚ್ಚಿಕೊಂಡಿದ್ದು, ಇದೊಂದು ಅಪರೂಪದ ಸಿನಿಮಾ ಆಗಲಿದೆ ಎಂದಿದ್ದಾರೆ.
ಇದನ್ನೂ ಓದಿ : ಸಿಎಂ ಬೊಮ್ಮಾಯಿಗೆ ಆರ್ಎಸ್ಎಸ್ ದಿಢೀರ್ ಬುಲಾವ್
ಆರ್.ಎಸ್.ಎಸ್ ಬಗ್ಗೆ ಊಹಾಪೋಹಗಳನ್ನು ಹರಿಬಿಡಲಾಗಿದೆ. ಗಾಂಧೀಜಿಯನ್ನು ಕೊಂದವರು ಆರ್.ಎಸ್.ಎಸ್ ನವರು ಎಂದು ಬಿಂಬಿಸಲಾಗುತ್ತಿದೆ. ಅದೆಲ್ಲದಕ್ಕೂ ಸಿನಿಮಾದಲ್ಲಿ ಉತ್ತರ ಕೊಡುತ್ತೇನೆ ಎಂದಿದ್ದಾರೆ.
ಆರ್.ಎಸ್.ಎಸ್ ಇರದೇ ಇದ್ದರೆ ಹಿಂದೂಗಳು ಉಳಿಯುತ್ತಿರಲಿಲ್ಲ. ಕಾಶ್ಮೀರವೇ ಇರುತ್ತಿರಲಿಲ್ಲ. ಹೀಗೆ ಸಾಕಷ್ಟು ವಿಷಯಗಳನ್ನು ಈ ಸಿನಿಮಾದಲ್ಲಿ ಹೇಳುವ ಪ್ರಯತ್ನ ಮಾಡುತ್ತೇನೆ. ಆರ್.ಎಸ್.ಎಸ್ ಈ ದೇಶಕ್ಕೆ ಏನೆಲ್ಲ ತ್ಯಾಗ ಮಾಡಿದೆ ಎನ್ನುವ ಕುರಿತಾದ ಸಿನಿಮಾ ಇದಾಗಲಿದೆ ಎಂದಿದ್ದಾರೆ ವಿಜಯೇಂದ್ರ ಪ್ರಸಾದ್.