ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಸೂಪರ್ ಸ್ಪೆಶಾಲಿಟಿ ( Super Speciality Hospital) ಆಸ್ಪತ್ರೆ ನಿರ್ಮಾಣವಾಗಬೇಕು ಎನ್ನುವ ಅಲ್ಲಿನ ಜನರ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿಯವರು ಜೊತೆಗೂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ & ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಸರಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು.ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ & ಆರೋಗ್ಯ ಸಚಿವ ಶ್ರೀ ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು ಎಂಬುದು ನನ್ನ ಆಗ್ರಹ ಎಂದು ಹೇಳಿದ್ದಾರೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ?
ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ.
ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ & ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ @BJP4Karnataka ಸರಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು. 1/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 25, 2022
ಕೋವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟೆಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ. ರಾಜ್ಯದಲ್ಲಿ ಇನ್ನೆಷ್ಟು ಆಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಎಂದು ಕುಮಾರಸ್ವಾಮಿಯವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಅಲ್ಲಿನ ಜನ ಸಾಮಾಜಿಕ ಜಾಲತಾಣಗಳ ಮುಕಅಂತರ ಅಭಿಯಾನ ನಡೆಸುತ್ತಿದ್ದಾರೆ. ಈ ಹಿಂದೆಯೂ ಅಭಿಯಾನ ನಡೆಸಿದ್ದರು ಆದರೆ, ಸರ್ಕಾರ ಭರವಸೆ ನೀಡಿ ಕೈ ತೊಳೆದುಕೊಂಡಿತ್ತು.
ಕೋವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟೆಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ. 4/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 25, 2022
ಇದೀಗ ಉತ್ತರ ಕನ್ನಡದ ಜನತೆ ಮತ್ತೊಮ್ಮೆ ಅಭಿಯಾನ ನಡೆಸುತ್ತಿದೆ. ಈ ಅಭಿಯಾನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಬಲ ವ್ಯಕ್ತಪಡಿಸಿದ್ದಾರೆ.