ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ತಾಂಡಾದ ತೋಟವೊಂದರಲ್ಲಿ ತಾಯಿಯೊಬ್ಬರು ತನ್ನ ಮೂರು ಮಕ್ಕಳನ್ನು ಕೃಷಿ ಹೊಂಡಕ್ಕೆ ತಳ್ಳಿ ನಂತರ ತಾನೂ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.
27 ವರ್ಷದ ಅನಿತಾ ಪಿಂಟು ಜಾಧವ್, ತನ್ನ ಮಕ್ಕಳಾದ 6 ವರ್ಷದ ಪ್ರವೀಣ, 4 ವರ್ಷದ ಸುದೀಪ ಮತ್ತು 2 ವರ್ಷದ ಮಮದಿಕಾಳನ್ನು ಕೃಷಿ ಹೊಂಡಕ್ಕೆ ಎಸೆದು ನಂತರ ಅನಿತಾ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಾಲ್ಕು ಜನರ ಮೃತದೇಹವನ್ನು ಹೊರತೆಗೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.