ವಿಧಾನಪರಿಷತ್ ಚುನಾವಣೆಯಲ್ಲಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬಿಜೆಪಿ ವರಿಷ್ಠರ ವಿರುದ್ಧ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರ ಪುತ್ರ ಬಿವೈ ವಿಜಯೇಂದ್ರ ಅವರ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಮಾನಿಗಳ ಆಕ್ರೋಶ ಭುಗಿಲೆತ್ತಿರುವ ಬೆನ್ನಲ್ಲೇ ವಿಜಯೇಂದ್ರ ಅವರು ತಮ್ಮ ಅಭಿಮಾನಿಗಳಿಗೆ `ಶಿಸ್ತು, ಸಹನೆ, ಸೌಜನ್ಯ’ದ ಸಂದೇಶ ರವಾನಿಸಿದ್ದಾರೆ.
ವನ್ನು ಬಿಜೆಪಿ ರಾಷ್ಟಿçÃಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಬಿಜೆಪಿ ಕರ್ನಾಟಕದ ಟ್ವಿಟ್ಟರ್ ಖಾತೆಗೂ ಟ್ಯಾಗ್ ಮಾಡಿರುವುದು ವಿಶೇಷ.
ತಮ್ಮ ತಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಬಗ್ಗೆ ಆರಂಭದಲ್ಲೇ ಹೇಳುವ ಮೂಲಕ ತಮಗೆ ಟಿಕೆಟ್ ತಪ್ಪಿಸಿದ ದೆಹಲಿ ಬಿಜೆಪಿ ನಾಯಕರ ದಂಡಿಗೂ ವಿಜಯೇಂದ್ರ ಸಂದೇಶ ರವಾನಿಸಿದ್ದಾರೆ.
`ಸಂಘದ ಶಿಸ್ತು, ಪಕ್ಷದ ಸಂಘಟನೆ, ಜನಪರ ಹೋರಾಟ ಹಾಗೂ ಸೇವೆಯನ್ನು ನಿಜ ಕಾಯಕವೆಂದು ತಿಳಿದು ಬದುಕಿನ ಹೆಜ್ಜೆ ಇಟ್ಟವರು ಪೂಜ್ಯ ತಂದೆಯವರು. ಈ ಕಾರಣಕ್ಕಾಗಿಯೇ ರಾಜ್ಯದ ಮುಖ್ಯಮಂತ್ರಿ ಆಗಿ ನಾಲ್ಕು ಬಾರಿ ಪ್ರಮಾಣವಚನ ಸ್ವೀಕರಿಸುವ ಅವಕಾಶ ಕಲ್ಪಿಸಿದ್ದು ಜನರ ಆರ್ಶೀವಾದ, ಭಾರತೀಯ ಜನತಾ ಪಕ್ಷ.
ಅಂತೆಯೇ ಅನಿರೀಕ್ಷಿತ ತಿರುವಿನಲ್ಲಿ ರಾಜಕೀಯ ಪ್ರವೇಶಿಸಿದ ನನಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷನಾಗಿ ಮಹತ್ವದ ಜವಾಬ್ದಾರಿ ನೀಡಿ ನನ್ನ ಬೆನ್ನು ತಟ್ಟಿ ಬೆಳೆಸುತ್ತಿರುವುದು ಪಕ್ಷ ಮತ್ತು ಪಕ್ಷದ ವರಿಷ್ಠರು. ರಾಜಕೀಯ ಅಧಿಕಾರಗಳು ನಿಂತ ನೀರಲ್ಲ, ಅದು ಹರಿಯುವ ನದಿಯ ಹಾಗೆ. ಇದನ್ನು ಕಾರ್ಯಕರ್ತರು, ಅಭಿಮಾನಿಗಳು ಅರ್ಥ ಮಾಡಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
ಅನಗತ್ಯ ಟೀಕೆ, ಟಿಪ್ಪಣಿಗಳು ಉದ್ಘೋಷಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದರೆ ಅದರಿಂದ ನನ್ನ ವ್ಯಕ್ತಿತ್ವಕ್ಕೆ ಹಾಗೂ ಪೂಜ್ಯ ತಂದೆಯವರ ಭಾವನೆಗಳಿಗೆ ಮಸಿ ಬಳಿದಂತೆ ಆಗುವುದೇ ಹೊರತು ನಮ್ಮನ್ನು ಬೆಂಬಲಿಸಿದAತೆ ಆಗುವುದಿಲ್ಲ ಎನ್ನುವುದನ್ನು ಹಿತೈಷಿ ಎಂದು ಹೇಳಿಕೊಳ್ಳುವ ಪ್ರತಿಯೊಬ್ಬರು ಅರಿಯಬೇಕೆಂದು ಈ ಸಂದರ್ಭದಲ್ಲಿ ಹೇಳಬಯಸುತ್ತೇನೆ.
ಪಕ್ಷದ ಶಿಸ್ತಿನ ಚೌಕಟ್ಟಿನಲ್ಲಿ ನಾವೆಲ್ಲರೂ ಸಾಮಾನ್ಯ ಕಾರ್ಯಕರ್ತರು. ಸಾಮರ್ಥ್ಯ ಇರುವವರನ್ನು ಪಕ್ಷ ಎಂದಿಗೂ ಕೈಬಿಟ್ಟಿಲ್ಲ, ಬಿಡುವುದೂ ಇಲ್ಲ. ಈ ನಿಟ್ಟಿನಲ್ಲಿ ಎಲ್ಲರೂ ಸಹನೆ, ಸೌಜನ್ಯದಿಂದ ವರ್ತಿಸಬೇಕೆಂದು ವಿನಮ್ರತೆಯಿಂದ ಮನವಿ ಮಾಡುವೆ.
ನಿಮ್ಮೆಲ್ಲರ ಬೆಂಬಲ, ಆರ್ಶೀವಾದ, ಸಹಕಾರ ಸದಾ ಇರಲಿ ಎಂದು ಕೋರುತ್ತೇನೆ’
ಎಂದು ಸುದೀರ್ಘ ಬಹಿರಂಗ ಪತ್ರ ಬರೆದಿದ್ದಾರೆ.
ಪರಿಷತ್ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ದೆಹಲಿ ವರಿಷ್ಠರಿಗೆ ವಿಜಯೇಂದ್ರ ಪರೋಕ್ಷ ಸಂದೇಶ – ಅಭಿಮಾನಿಗಳಿಗೆ ಸೌಜನ್ಯದ ಮನವಿ