ಟೆಸ್ಟ್ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ಅವರು ರನ್ ಗಳಿಕೆಯಲ್ಲಿ ವೀರೇಂದ್ರ ಸೆಹ್ವಾಗ್ ಅವರನ್ನು ಹಿಂದಿಕ್ಕಿದ್ದಾರೆ.
ಟೆಸ್ಟ್ನಲ್ಲಿ ಸೆಹ್ವಾಗ್ ಅವರು 8,503 ರನ್ ಗಳಿಸಿದ್ದರು. ಆದರೆ ವಿಂಡೀಸ್ ವಿರುದ್ಧದ ಮೊದಲ ಟೆಸ್ಟ್ನಲ್ಲಿ 36 ರನ್ ಗಳಿಸುವ ಮೂಲಕ 8,515 ರನ್ ಗಳಿಸಿದ್ದಾರೆ.
ಅತೀ ಹೆಚ್ಚು ಟೆಸ್ಟ್ ರನ್ ಗಳಿಸಿದ ಭಾರತದ ಆಟಗಾರರು:
ಸಚಿನ್ ತೆಂಡೂಲ್ಕರ್ ಅವರು 200 ಟೆಸ್ಟ್ ಪಂದ್ಯಗಳಲ್ಲಿ 15,921 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ.
ರಾಹುಲ್ ದ್ರಾವಿಡ್ ಅವರು 153 ಟೆಸ್ಟ್ಗಳಲ್ಲಿ 13,265 ರನ್ ಗಳಿಸಿದ ಎರಡನೇ ಸ್ಥಾನದಲ್ಲಿದ್ದಾರೆ.
ಸುನಿಲ್ ಗವಾಸ್ಕರ್ ಅವರು 125 ಟೆಸ್ಟ್ಗಳಲ್ಲಿ 10,122 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.
ವಿವಿಎಸ್ ಲಕ್ಷ್ಮಣ್ ಅವರು 134 ಪಂದ್ಯಗಳಿಂದ 8,781 ರನ್ ಗಳಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
ವಿರಾಟ್ ಕೊಹ್ಲಿ ಅವರು 110 ಪಂದ್ಯಗಳಿಂದ 8,515 ರನ್ ಗಳಿಸಿ ಐದನೇ ಸ್ಥಾನಕ್ಕೆ ಜಿಗಿದಿದ್ದಾರೆ.
ವೀರೇಂದ್ರ ಸೆಹ್ವಾಗ್ ಅವರು 103 ಪಂದ್ಯಗಳಲ್ಲಿ 8,503 ರನ್ ಗಳಿಸಿ ಆರನೇ ಸ್ಥಾನದಲ್ಲಿದ್ದಾರೆ.
ADVERTISEMENT
ADVERTISEMENT