ಉತ್ತರ ಪ್ರದೇಶದ ನೋಯ್ಡಾದ ವಸತಿ ಸೊಸೈಟಿಯೊಂದರ ಅಪಾರ್ಟ್ಮೆಂಟ್ನ ಕಾಂಪೌಂಡ್ನ ಒಂದು ಭಾಗದ ಗೋಡೆ ಕುಸಿದು ಬಿದ್ದಿದೆ (Wall Collapse). 4 ಜನ ಕಟ್ಟಡ ಕಾರ್ಮಿಕರು ಕಾಂಪೌಂಡ್ನ ಅವಶೇಷದಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ ಸೆಕ್ಟರ್ 21 ರ ಅತಿ ದೊಡ್ಡ ಅಪಾರ್ಟ್ಮೆಂಟ್ ಇದಾಗಿದೆ. ರಕ್ಷಣಾ ಕಾರ್ಯಕ್ಕಾಗಿ ಬುಲ್ಡೋಜರ್ ಬಳಸಲಾಗುತ್ತಿದೆ. ಸ್ಥಳದಲ್ಲಿ ಅಗ್ನಿ ಶಾಮಕ ದಳ ಮತ್ತು ಹಿರಿಯ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಾರ್ಟ್ಮೆಂಟ್ ಸಮುಚ್ಚಯದ ಬಳಿ ಇರುವ ಒಳಚರಂಡಿ ವ್ಯವಸ್ಥೆ ಸರಿಪಡಿಸಲು ನೋಯ್ಡಾ ಅಭಿವೃದ್ಧಿ ಪ್ರಾಧಿಕಾರ ಗುತ್ತಿಗೆ ನೀಡಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಕಾರ್ಮಿಕರು ಇಟ್ಟಿಗೆಗಳನ್ನು ಹೊರತೆಗೆಯುವಾಗ ಗೋಡೆ ಕುಸಿದಿದೆ (Wall Collapse) ಎಂದು ನಮಗೆ ತಿಳಿಸಲಾಗಿದೆ, ಈ ಬಗ್ಗೆ ತನಿಖೆ ನಡೆಸಲಾಗುವುದು. ಮುಂಜಾಗ್ರತಾ ಕ್ರಮವಾಗಿ ಪ್ರದೇಶದಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸುಹಾಸ್ ಎಲ್.ವೈ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯಗಳನ್ನು ಯುದ್ಧಾಧಾರಿತವಾಗಿ ನಡೆಸುವಂತೆ ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ. ಇದನ್ನೂ ಓದಿ : ನಿರ್ಮಾಣ ಹಂತದ ಗೋದಾಮು ಗೋಡೆ ಕುಸಿತ – 5 ಜನ ಸಾವು