ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಕಲ್ಪೆಟ್ಟ ಪಕ್ಕದ ಕೈನಟ್ಟುನಲ್ಲಿರುವ ಸಂಸದ ರಾಹುಲ್ ಗಾಂಧಿಯವರ ಕಚೇರಿಯ ಮೇಲೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಕಾರ್ಯರ್ತರು ಇಂದು ಶುಕ್ರವಾರ ದಾಳಿ ಮಾಡಿ ಧ್ವಂಸ ಮಾಡಿದ್ದಾರೆ.
ಸುಪ್ರಿಂ ಕೋರ್ಟ್ ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಿದ ಪ್ರದೇಶದಲ್ಲಿ ನಿಯಮಬಾಹಿರವಾಗಿ ಸಂಸದ ರಾಹುಲ್ ಗಾಂಧಿಯವರು ಕಚೇರಿ ಹೊಂದಿದ್ದಾರೆ ಎಂದು ಎಸ್ಎಫ್ಐ ಕಾರ್ಯಕರ್ತರು ಆರೋಪಿಸಿದ್ದಾರೆ.
ಕಚೇರಿಯಲ್ಲಿದ್ದ ಖುರ್ಚಿಗಳನ್ನು ಮುರಿಯಲಾಗಿದೆ ಮತ್ತು ಕಚೇರಿ ನಿರ್ವಾಹಕರ ಮೇಲೆ ಹಲ್ಲೆ ಮಾಡಲಾಗಿದೆ. ಎಸ್ಎಫ್ಐ ಗೂಂಡಾಗಳ ಪೂರ್ವನಿಯೋಜಿತ ಕೃತ್ಯ ಇದು ಎಂದು ಕಾಂಗ್ರೆಸ್ ಶಾಸಕ ಟಿ ಸಿದ್ದಿಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನೆಲಕಚ್ಚಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮೇಲೂ ಶಾಸಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್, ಪ್ರತಿ ಸಂರಕ್ಷಿತ ಅರಣ್ಯ, ರಾಷ್ಟ್ರೀಯ ಉದ್ಯಾನವನ ಮತ್ತು ವನ್ಯಜೀವಿ ಉದ್ಯಾನವನಗಳ ಸುತ್ತಲಿನ 1 ಕಿ.ಮೀ ಪ್ರದೇಶದವನ್ನು ಪರಿಸರ ಸಂರಕ್ಷಿತ ಪ್ರದೇಶ ಎಂದು ಘೋಷಿಸಿತ್ತು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಉತ್ತರ ಕೇರಳದ ಹಿಲ್ಲಿ ಜಿಲ್ಲೆಯ ವಯನಾಡು ಕ್ಷೇತ್ರದ ಸಂಸದರಾಗಿದ್ದಾರೆ.