ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರನ್ನು ಇಂದು ಬಂಧಿಸಿದೆ.
ನಿನ್ನೆ ಶುಕ್ರವಾರವಷ್ಟೇ ಸಚಿವರ ಆಪ್ತರ ಮನೆ ಮೇಲೆ ದಾಳಿ ಮಾಡಿದ್ದ ಇಡಿ, ಸಚಿವರ ಆಪ್ತರಿಂದ 20 ಕೋ.ರೂ ನಗದು ಕೋಟಿ ವಶಕ್ಕೆ ಪಡೆದುಕೊಂಡಿತ್ತು.
ರಾತ್ರಿಯ ವಿಚಾರಣೆಯ ನಂತರ ಪಾರ್ಥ ಚಟರ್ಜಿ ಅವರನ್ನು ಬಂಧಿಸಲಾಗಿದೆ. ಅವರನ್ನು ಇಡಿ ಕಚೇರಿಗೆ ಕರೆದೊಯ್ಯಲಾಗುತ್ತಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ಮೊದಲು ಶಿಕ್ಷಣ ಸಚಿವರಾಗಿದ್ದ ಪಾರ್ಥ ಚಟರ್ಜಿ ಅವರು ಶಿಕ್ಷಕರ ನೇಮಕಾತಿ ಹಗರಣ ಬಯಲಾಗುತ್ತಿದ್ದಂತೆಯೇ, ಕೈಗಾರಿಕೆಗಳು ಮತ್ತು ವಾಣಿಜ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು.