ADVERTISEMENT
ರಾಜ್ಯದ ಅಭಿವೃದ್ಧಿ ಮತ್ತು ರಾಜ್ಯದ ಜನರ ಕ್ಷೇಮಾಭಿವೃದ್ಧಿಗಾಗಿ ನಾನು ದಿನಕ್ಕೆ ಎರಡು ಗಂಟೆ ಹೆಚ್ಚು ಕೆಲಸ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದ್ದಾರೆ.
ಈ ಮೂಲಕ ಆಗಸ್ಟ್ 15ರ ಬಳಿಕ ಸಿಎಂ ಬದಲಾವಣೆ ಆಗಬಹುದು ಎಂದಿದ್ದ ತಮ್ಮದೇ ಪಕ್ಷದ ಮಾಜಿ ಶಾಸಕ ಸುರೇಶ್ ಗೌಡ ನೀಡಿದ್ದ ಹೇಳಿಕೆಗೆ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಇಂತಹ ಊಹಾಪೋಹಗಳು ನನ್ನನ್ನು ಇನ್ನಷ್ಟು ಬಲಿಷ್ಠನನ್ನಾಗಿ ಮಾಡಿವೆ ಮತ್ತು ಜನರಿಗಾಗಿ ಇನ್ನಷ್ಟು ಕೆಲಸ ಮಾಡುವಂತೆ ಪ್ರೇರೇಪಿಸಿವೆ. ರಾಜ್ಯದ ಅಭಿವೃದ್ಧಿ ಮತ್ತು ರಾಜ್ಯದ ಜನರ ಕ್ಷೇಮಾಭಿವೃದ್ಧಿಗಾಗಿ ನಾನು ದಿನಕ್ಕೆ ಎರಡು ಗಂಟೆ ಹೆಚ್ಚು ಕೆಲಸ ಮಾಡುತ್ತೇನೆ
ಎಂದು ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ್ದಾರೆ.
ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲವರ್ಧನೆ ಮಾಡಲಾಗುವುದು ಮತ್ತು ಜನರ ಬಳಿಗೆ ಪಕ್ಷವನ್ನು ತೆಗೆದುಕೊಂಡು ಹೋಗಲಾಗುತ್ತದೆ.
ADVERTISEMENT