ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಎಂಎಲ್ಸಿ ಟಿಕೆಟ್ ನೀಡಲಾಗಿದೆ.
ಸದ್ಯ ಸಿದ್ದರಾಮಯ್ಯ ಸರ್ಕಾರದಲ್ಲಿ ಸಣ್ಣ ನೀರಾವರಿ ಸಚಿವ ಎನ್ ಎಸ್ ಭೋಸೆರಾಜು ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದರಾಜು, ಮಾಜಿ ಎಂಎಲ್ಸಿ ಐವಾನ್ ಡಿಸೋಜಾ, ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತ್ ಕುಮಾರ್ ಮತ್ತು ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷೆ ಶಿವಮೊಗ್ಗ ಮೂಲದ ಬಿಲ್ಕಿಸೋ ಬಾನೋ, ಕಲಬುರಗಿ ಕಾಂಗ್ರೆಸ್ ಅಧ್ಯಕ್ಷ ಜಗದೇವ್ ಗುತ್ತೇದಾರ್ ಅವರಿಗೆ ಟಿಕೆಟ್ ನೀಡಲಾಗಿದೆ.
ಎಂಎಲ್ಸಿ ಸ್ಥಾನಕ್ಕೆ ಶೆಟ್ಟರ್ ನೀಡಿದ್ದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಾಜಿ ಶಾಸಕ ಬಸನಗೌಡ ಬಾದರ್ಲಿ ಅವರಿಗೆ ಟಿಕೆಟ್ ನೀಡಲಾಗಿದೆ.
ಜೂನ್ 13ರಂದು 11 ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ವಿಧಾನಸಭೆಯಲ್ಲಿ ಮೂರು ಪಕ್ಷಗಳ ಬಲಾಬಲದ ಪ್ರಕಾರ ಕಾಂಗ್ರೆಸ್ 7, ಬಿಜೆಪಿ 3 ಮತ್ತು ಜೆಡಿಎಸ್ 1 ಸ್ಥಾನ ಗೆಲ್ಲಲು ಅವಕಾಶಗಳಿವೆ.
ADVERTISEMENT
ADVERTISEMENT