ರಾಜ್ಯದಲ್ಲಿ ಶೀಘ್ರವೇ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ವಿಧಾನಪರಿಷತ್ ಗೆ ಕಳುಹಿಸಲು ಬಿಜೆಪಿ ನಿರ್ಧರಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ರಾಜ್ಯ ವಿದಾನಪರಿಷತ್ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಸರ್ಕಾರ 1:5 ರ ಅನುಪಾತದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ರವಾನೆ ಮಾಡಲು ನಿರ್ಧರಿಸಿದೆ. ಈ ಪಟ್ಟಿಯಲ್ಲಿ ಬಿವೈ ವಿಜಯೇಂದ್ರ ಅವರ ಹೆಸರು ಸೇರ್ಪಡೆ ಮಾಡಲಾಗಿದೆ.
ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ :
ಎಮ್ಎಲ್ಸಿ ಲಕ್ಷ್ಮಣ ಸವದಿ, ಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ,
ಎಸ್ಸಿ ಮೋರ್ಚಾ ಅಧ್ಯಕ್ಷ ಚಲವಾದಿ ನಾರಾಯಣ ಸ್ವಾಮಿ, ಉಪಾಧ್ಯಕ್ಷ ರಾಜೇಂದ್ರ ಹಾಗೂ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರ ಹೆಸರನ್ನು ಫೈನಲ್ ಮಾಡಿ ಮಾಡಿ ಹೈಕಮಾಂಡ್ ಒಪ್ಪಿಗೆಗೆ ಕಳುಹಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಕಲೆ, ಸಾಹಿತ್ಯ, ಸಿನಿಮಾ ಕ್ಷೇತ್ರದಿಂದ ಒಬ್ಬರ ಹೆಸರು ಕಳಿಸಿರುವ ರಾಜ್ಯ ಬಿಜೆಪಿ ಘಟಕ, ರಾಜ್ಯಸಭಾ ಮೂರನೇ ಸ್ಥಾನಕ್ಕೆ ಲಹರಿ ವೇಲು ಹಾಗೂ ಪ್ರಕಾಶ್ ಶೆಟ್ಟಿಯವರ ಹೆಸರನ್ನು ಶಿಫಾರಸ್ಸು ಮಾಡಿದೆ.
ರಾಜ್ಯ ಸಭೆಯ ಎರಡು ಸ್ಥಾನಗಳು ಬಿಜೆಪಿ ಪಾಲಾಗಲಿವೆ. ಆದರೆ, ಮೂರನೇ ಸ್ಥಾನಕ್ಕೆ ಮತಗಳ ಕೊರತೆ ಎದುರಾಗಲಿದೆ. ಹೆಚ್ಚುವರಿ ಮತಗಳನ್ನ ಅನ್ಯಪಕ್ಷಗಳಿಂದ ಪಡೆಯುವಂತೆ ಬಿಜೆಪಿ ಹೈಕಮಾಂಡ್ ಸೂಚಿಸುವ ಸಾಧ್ಯತೆಯಿದೆ.