ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ವೈಎಸ್ಆರ್ ತೆಲಂಗಾಣ (YSR Telagana Congress) ಕಾಂಗ್ರೆಸ್ ಪಕ್ಷದ ಸಂಸ್ಥಾಪಕಿ ವೈ ಎಸ್ ಶರ್ಮಿಲಾ (Y S Sharmila) ಅವರು ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ( D K Shivakumar) ಅವರನ್ನು ಭೇಟಿಯಾಗಿದ್ದಾರೆ.
ಬೆಂಗಳೂರಿನ ಡಿಕೆಶಿವಕುಮಾರ್ ಅವರ ನಿವಾಸದಲ್ಲಿ ಭೇಟಿ ನಡೆದಿದೆ.
ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿದ್ದ ದಿವಂಗತ ರಾಜಶೇಖರ ರೆಡ್ಡಿ ಅವರ ಪುತ್ರಿ ಆಗಿರುವ ವೈ ಎಸ್ ಶರ್ಮಿಲಾ ಅವರು ಸಹೋದರ ಆಂಧ್ರ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿಗೆ ಸೆಡ್ಡು ಹೊಡೆದು ತೆಲಂಗಾಣದಲ್ಲಿ ತಮ್ಮದೇ ಪ್ರಾದೇಶಿಕ ಪಕ್ಷವನ್ನು ಕಟ್ಕೊಂಡಿದ್ದಾರೆ.
ಮೂಲಗಳ ಪ್ರಕಾರ ಶರ್ಮಿಲಾ ಅವರಿಗೆ ದೂರವಾಣಿ ಕರೆ ಮಾಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರು ಕಾಂಗ್ರೆಸ್ಗೆ ಬರುವಂತೆ ಆಹ್ವಾನ ನೀಡಿದ್ದಾರೆ.
ಈ ವರ್ಷದ ಕೊನೆಯಲ್ಲಿ ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಪಕ್ಷ ಕಟ್ಟುವ ಭಾಗವಾಗಿ ಶರ್ಮಿಲಾ ಅವರು ತೆಲಂಗಾಣದಲ್ಲಿ ಪಾದಯಾತ್ರೆ ಕೈಗೊಂಡಿದ್ದಾರೆ.
ADVERTISEMENT
ADVERTISEMENT