ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಯೋಜನೆ ಯುವನಿಧಿ ಜನವರಿ 1ರಿಂದ ಜಾರಿಯಾಗಲಿದೆ.
ಯುವನಿಧಿ ಯೋಜನೆಯಡಿ ಫಲಾನುಭವಿಗಳು ಡಿಸೆಂಬರ್ 26ರಿಂದ ಸೇವಾಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಪದವಿ ಪಡೆದಿರುವ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ ಮತ್ತು ಡಿಪ್ಲೋಮಾ ಪದವೀಧರರಿಗೆ ಪ್ರತಿ ತಿಂಗಳು ಒಂದೂವರೆ ಸಾವಿರ ರೂಪಾಯಿಯನ್ನು ಸರ್ಕಾರ ಜಮೆ ಮಾಡಲಿದೆ.
ADVERTISEMENT
2022-23ರ ಅವಧಿಯಲ್ಲಿ ಪದವಿ ಅಥವಾ ಉನ್ನತ ಶಿಕ್ಷಣ ಪದವಿ ಅಥವಾ ಡಿಪ್ಲೋಮಾ ಪದವಿ ಪಡೆದು 6 ತಿಂಗಳಿಂದ ಕೆಲಸವಿಲ್ಲದೇ ನಿರುದ್ಯೋಗಿಗಳಾಗಿರುವವರು ಈ ಯೋಜನೆಗೆ ಅರ್ಹರು.
ಗರಿಷ್ಠ 2 ವರ್ಷ ಅಥವಾ ಉದ್ಯೋಗ ಸಿಗುವವರೆಗೆ ಫಲಾನುಭವಿಗಳ ಖಾತೆಗೆ ರಾಜ್ಯ ಸರ್ಕಾರ ಹಣ ಜಮೆ ಮಾಡಲಿದೆ.
ADVERTISEMENT