ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾಗಿರುವ ಯುವ ನಿಧಿ ಸಂಬಂಧ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ.
ಈ ಯೋಜನೆಯಲ್ಲಿ ಪದವೀಧರ ನಿರುದ್ಯೋಗಿಗಳಿಗೆ 2 ವರ್ಷದವರೆಗೆ ಪ್ರತಿ ತಿಂಗಳು 3 ಸಾವಿರ ರೂ. ಮತ್ತು ಡಿಪ್ಲೋಮಾ ಪದವೀಧರರಿಗೆ 1.5 ಸಾವಿರ ರೂಪಾಯಿ ಸಹಾಯಧನ ಸಿಗಲಿದೆ.
ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕ ಬಳಿಕ ಇವತ್ತು ಕಾರ್ಮಿಕ ಇಲಾಖೆ ಯುವ ನಿಧಿ ಯೋಜನೆ ಸಂಬಂಧ ಮಾರ್ಗಸೂಚಿಗಳನ್ನು ಉಲ್ಲೇಖಿಸಿ ಆದೇಶ ಹೊರಡಿಸಿದೆ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು..?
2023ರ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆಯಾಗಿ ಪದವಿ/ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆ ಅನ್ವಯ.
2 ವರ್ಷದವರೆಗೆ ಮಾತ್ರ ಯುವನಿಧಿ ಅಡಿಯಲ್ಲಿ ಹಣಕಾಸು ನೆರವು ಪಡೆಯಬಹುದು.
ಎರಡು ವರ್ಷದೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗಳಿಗೆ ಯೋಜನೆ ಸೌಲಭ್ಯ ಸಿಗಲ್ಲ
ಯುವ ನಿಧಿ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಹಾಕಲಾಗುತ್ತದೆ
ಫಲಾನುಭವಿಗಳಿಗೆ ಸೇವಾ ಸಿಂಧು ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ
ನಿರುದ್ಯೋಗಿ ಎಂಬ ಬಗ್ಗೆ ಅರ್ಜಿ ಸಲ್ಲಿಸಿದವರು ಸ್ವಯಂ ಘೋಷಣೆ ಮಾಡಿಕೊಳ್ಳಬೇಕು
ಒಂದು ವೇಳೆ ನಿರುದ್ಯೋಗಿ ಎಂದು ತಪ್ಪು ಮಾಹಿತಿ ನೀಡಿ ಯೋಜನೆಯ ಲಾಭ ಪಡೆದರೆ ಆ ದಂಡ ವಿಧಿಸಲಾಗುತ್ತದೆ.
ಯಾರಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ:
ಉನ್ನತ ವ್ಯಾಸಂಗಕ್ಕೆ ಈಗಾಗಲೇ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮಾಡುತ್ತಿರುವವರು
ಶಿಶಿಕ್ಷು (Apprentice) ವೇತನವನ್ನು ಪಡೆಯುತ್ತಿರುವವರು
ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಉದ್ಯೋಗಿಗಳಾಗಿದ್ದರೆ ಯೋಜನೆಯ ಲಾಭ ಸಿಗಲ್ಲ
ರಾಜ್ಯ ಅಥವಾ ಕೇಂದ್ರದ ವಿವಿಧ ಯೋಜನೆಯಡಿ ಮತ್ತು ಬ್ಯಾಂಕ್ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಮಾಡುತ್ತಿದ್ದಾರೆ.