ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ.
ಜೂನ್ 23ರೊಳಗೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿ ಆಯೋಗಕ್ಕೆ ಸಲ್ಲಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿತ್ತು.
ಮತದಾರರ ಪಟ್ಟಿ ಮುದ್ರಣದ ಬಗ್ಗೆ ಚುನಾವಣಾ ಆಯೋಗ ಜಿಲ್ಲಾಧಿಕಾರಿಗಳಿಗೆ ಹೊಸ ಸುತ್ತೋಲೆ ಹೊರಡಿಸಿದೆ.
ಮತದಾರರ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜುಲೈ 4 ಕಡೆಯ ದಿನ. ಆ ಆಕ್ಷೇಪಣೆಗಳನ್ನು ಇತ್ಯರ್ಥ್ಯಪಡಿಸಲು ಜುಲೈ 7 ಕಡೆಯ ದಿನ.
ಅಕ್ಷೇಪಣೆಗಳನ್ನು ಇತ್ಯರ್ಥ್ಯಪಡಿಸಿದ ನಂತರ ಮುದ್ರಕರಿಂದ ಅಗತ್ಯ ಬದಲಾವಣೆಯನ್ನು ಮಾಡಿಸಿ ಅಂತಿಮ ಚೆಕ್ಲಿಸ್ಟ್ ಪಡೆದುಕೊಂಡು ಕ್ಷೇತ್ರದ ವ್ಯಾಪ್ತಿಯಲ್ಲಿ ಪರಿಶೀಲಿಸಲು ಕಡೆಯ ದಿನ ಜುಲೈ 12.
ಆ ಬಳಿಕ ಚುನಾವಣಾ ಆಯೋಗ ನಿಗದಿಪಡಿಸುವ ದಿನಾಂಕದಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗ ಸೂಚಿಸಿದೆ.
ADVERTISEMENT
ADVERTISEMENT