ಉಕ್ರೇನ್ನಲ್ಲಿರುವ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮಕೈಗೊಳ್ಳಲಾಗುತ್ತಿದೆ. ವಿಪತ್ತು ನಿರ್ವಹಣಾ ಇಲಾಖೆಯಿಂದಲೇ ವಿದ್ಯಾರ್ಥಿಗಳ ಪ್ರಯಾಣ ಹಾಗೂ ಇನ್ನಿತರ ವೆಚ್ಚಗಳನ್ನು ಭರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು, ಉಕ್ರೇನ್ನ ಪಶ್ಚಿಮ ಭಾಗದಲ್ಲಿದ್ದ ವಿದ್ಯಾರ್ಥಿಗಳು ರೊಮೆನಿಯಾ ಮೂಲಕ ಭಾರತಕ್ಕೆ ಮರಳಿದ್ದಾರೆ. ಮುಂಬೈ ಹಾಗೂ ನವದೆಹಲಿಗೆ ಆಗಮಿಸಿರುವ ವಿದ್ಯಾರ್ಥಿಗಳನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ. ವಿಪತ್ತು ನಿರ್ವಹಣಾ ಇಲಾಖೆಯಿಂದಲೇ ವಿದ್ಯಾರ್ಥಿಗಳ ಪ್ರಯಾಣ ಹಾಗೂ ಇನ್ನಿತರ ವೆಚ್ಚಗಳನ್ನು ಭರಿಸಲಾಗುತ್ತಿದೆ ಎಂದು ತಿಳಿಸಿದರು.
ಇನ್ನುಳಿದ, ವಿದ್ಯಾರ್ಥಿಗಳನ್ನು ಕರೆತರಲು ಕೇಂದ್ರ ವಿದೇಶಾಂಗ ಸಚಿವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಕೇಂದ್ರ ಹಾಗೂ ರಾಜ್ಯದ ಸಹಾಯವಾಣಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. ಹಲವಾರು ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆಗೆ ಚರ್ಚಿಸಲಾಗಿದೆ. ಉಕ್ರೇನ್ನ ಕಾರ್ಕೈವ್ನಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಸಿಲುಕಿದ್ದಾರೆ ಎಂದರು.