ಬೆಂಗಳೂರಿನ ಪ್ರೇಮಿಗಳು ಉಡುಪಿಯಲ್ಲಿ ಸಾವನ್ನಪ್ಪಿರುವ ಪ್ರಕರಣದ ತನಿಖೆ ಆರಂಭವಾಗಿದೆ.
ಬೆಂಗಳೂರಿನ ನಿವಾಸಿಗಳಾದ ಯಶವಂತ ಯಾದವ್ ಹಾಗೂ ಜ್ಯೋತಿ ಪ್ರೀತಿಗೆ ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಮನೆ ಬಿಟ್ಟು ಬಂದಿದ್ದು, ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಸ್ನೇಹಿತನ ಕಾರು ಬಾಡಿಗೆಗೆ ಪಡೆದ ಜೋಡಿಗಳು ಬ್ರಹ್ಮಾವರ ತಾಲೂಕಿನ ಹೆಗ್ಗುಂಜೆ ಗ್ರಾಮಕ್ಕೆ ಬಂದಿದ್ದು, ಕಾರಿನ ಹಿಂದಿನ ಸೀಟಿನಲ್ಲಿ ತಬ್ಬಿಕೊಂಡು ಕುಳಿತು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಘಟನೆ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳ ಮಹಜರು ಪ್ರಕ್ರಿಯೆ ಅಂತ್ಯಗೊಂಡಿದೆ. ಎಫ್ಎಸ್ಎಲ್ ತಂಡ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.