ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ತಮ್ಮ ಜನ್ಮದಿನದ ಸಂಭ್ರಮದಲ್ಲಿದ್ದು, ಈ ಬಾರಿ ವಿನೂತನವಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.
ಯಡಿಯೂರಪ್ಪ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಇಂದು 15 ರೈತರಿಗೆ ಉಚಿತ ಟ್ರ್ಯಾಕ್ಟರ್ ವಿತರಣೆಗೆ ಚಾಲನೆ ನೀಡಲಿದ್ದಾರೆ. ಬಸವ ಅಗ್ರಿಟೆಕ್,ಎಸ್ ಆರ್ ಎಸ್ ಟ್ರ್ಯಾಕ್ಟರ್ಸ್ ಪ್ರಾಯೋಜಕತ್ವದಲ್ಲಿ ಕಾವೇರಿ ನಿವಾಸದಲ್ಲಿ ಉಚಿತ ಟ್ರ್ಯಾಕ್ಟರ್ ವಿತರಣೆಗೆ ಕಾರ್ಯಕ್ರಮ ನಡೆಯಲಿದೆ.
ಇನ್ನು, ಬಿಎಸ್ ಯಡಿಯೂರಪ್ಪ ಹೆಬ್ಬಾಳದ ರಾಧಾಕೃಷ್ಣ ದೇವಾಲಯಕ್ಕೆ ಭೇಟಿ ನೀಡಿದ್ದು, ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ಕಟ್ಟಾ ಸುಬ್ರಮಣ್ಯ ನಾಯ್ಡು ಹಾಗೂ ನಾರಾಯಣಸ್ವಾಮಿ ಬಿಎಸ್ವೈಗೆ ಸಾಥ್ ನೀಡಿದ್ದಾರೆ.