ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಮಾಜಿ ಸಂಸದ ಶಿವರಾಮೇಗೌಡರನ್ನು ಉಚ್ಛಾಟಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಕೆ ಕುಮಾರಸ್ವಾಮಿ ಆದೇಶ ಮಾಡಿದ್ದಾರೆ.
ಶಿವರಾಮೇಗೌಡ ಅವರು ಮಾಜಿ ಸಂಸದ ದಿ.ಮಾದೇಗೌಡರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಪಕ್ಷದಿಂದ ಉಚ್ಛಾಟಿಸುವಂತೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿಯವರು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಕೆ ಕುಮಾರಸ್ವಾಮಿಯವರಿಗೆ ಸೂಚಿಸಿದ್ದರು.