ಲಖೀಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಲಖಿಂಪುರ ಘಟನೆಯ ಸಾಕ್ಷಿಗಳೊಬ್ಬರ ಮೇಲೆ ನಡೆದ ದಾಳಿಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಸಾಕ್ಷಿಗಳನ್ನು ರಕ್ಷಿಸಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಹೇಳಿದೆ.
ಕೇಂದ್ರ ಸಚಿವರೊಬ್ಬರ ಪುತ್ರ ಆಶಿಶ್ ಮಿಶ್ರಾ ಅವರಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಸಂತ್ರಸ್ತರ ಕುಟುಂಬಗಳು ಸಲ್ಲಿಸಿರುವ ಮನವಿಯ ಕುರಿತು ಉತ್ತರ ಪ್ರದೇಶದಿಂದ ಪ್ರತಿಕ್ರಿಯೆಯನ್ನು ಸುಪ್ರೀಂ ಕೋರ್ಟ್ ಕೇಳಿದೆ.
ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಸಾಕ್ಷಿಗಳನ್ನು ರಕ್ಷಿಸಲು ತೆಗೆದುಕೊಂಡ ಕ್ರಮಗಳನ್ನು ವಿವರಿಸುವ ವಿವರವಾದ ಅಫಿಡವಿಟ್ ಅನ್ನು ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಇನ್ನು ಮುಂದಿನ ವಿಚಾರಣೆಯನ್ನು ಮಾರ್ಚ್ 24 ಕ್ಕೆ ನಿಗದಿಪಡಿಸಿದೆ.
ಮಿಶ್ರಾಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಮೃತ ರೈತರ ಕುಟುಂಬ ಸದಸ್ಯರು ಫೆಬ್ರವರಿ 21 ರಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಉತ್ತರ ಪ್ರದೇಶವು ಅಲಹಾಬಾದ್ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ವಿಫಲವಾದ ಕಾರಣ ಕುಟುಂಬ ಸದಸ್ಯರು ಉನ್ನತ ನ್ಯಾಯಾಲಯವನ್ನು ಸಂಪರ್ಕಿಸಲು ಒತ್ತಾಯಿಸಲಾಗಿದೆ ಎಂದು ಭೂಷಣ್ ಹೇಳಿದರು.
https://youtu.be/7R_IfHf4X3A