ರೈಲ್ವೆ ಹಳಿ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾಗ ಸ್ಥಳೀಯ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳ ರಾಜ್ಯದ ಮಿಡ್ನಾಪುರದ ಕೋಸ್ಸೆ ನದಿ ಮೇಲಿನ ರೈಲ್ವೆ ಹಳಿ ಬಳಿ ಶನಿವಾರ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ರೈಲ್ವೇ ಪೊಲೀಸರು ರಕ್ಷಣೆ ಮಾಡಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ರೈಲ್ವೆ ಸೀನಿಯರ್ ಸೆಕ್ಷನ್ ಇಂಜಿನಿಯರ್ ಬಿಸ್ವಜಿತ್ ಬಾಲಾ ಅವರು ಮಾತನಾಡಿ, ಈ ಪ್ರದೇಶದಲ್ಲಿ ರೈಲ್ವೆ ಹಳಿಯ ಮೇಲೆ ಹತ್ತುವುದನ್ನು ನಿಷೇಧಿಸಲಾಗಿದೆ. ಹಾಗಿದ್ದಾಗ್ಯೂ ಅನೇಕರು ಇಲ್ಲಿಗೆ ಬಂದು ಫೋಟೋ ತೆಗೆಯಲು ಮುಂದಾಗುತ್ತಾರೆ. ಸೆಲ್ಫೀ ಕ್ಲಿಕ್ಕಿಸಿಕೊಳ್ಳುತ್ತಿದ್ದ ಈ ಹುಡುಗರು ರೈಲಿನ ಹಾರ್ನ್ ಕೇಳಿದರೂ ಸರಿಯಲೂ ಇಲ್ಲ, ದೂರ ಓಡಲೂ ಇಲ್ಲ. ಹೀಗಾಗಿ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.
ಹುಡುಗರು ಪಿಕ್ನಿಕ್ ಎಂದು ಇಲ್ಲಿಗೆ ಬಂದಿದ್ದರು, ರೈಲು ಹೇಳಿ ಮೇಲೆ ನಿಂತು ಸೆಲ್ಫೀ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ರೈಲು ಒಂದೇ ಸಮನೇ ಹಾರ್ನ್ ಮಾಡಿದರೂ ಕೇಳಿಸಿಕೊಳ್ಳದೆ ಫೋಟೋ ತೆಗೆದುಕೊಳ್ಳುತ್ತಿದ್ದರು. ಪರಿಣಾಮ ರೈಲು ಬಡಿದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆ ದಾಖಲಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.